ಬಾಗಲಕೋಟೆ : ಪೊಲೀಸ್ ಕ್ವಾರ್ಟಸ್ ನಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿ ಮನೆಯಲ್ಲಿದ್ದ ವಸ್ತುಗಳು ಛಿದ್ರ ಛಿದ್ರವಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯ ಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಹೆಡ್ ಕಾನ್ಸ್ಟೇಬಲ್ ರವೀಂದ್ರ ದಳವಾಯಿ ಮನೆಯಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ.
ಸ್ಪೋಟದ ಪರಿಣಾಮ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳು ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾನ್ಸ್ಟೇಬಲ್ ರವೀಂದ್ರ ದಳವಾಯಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.