ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದೆ.
ಶಾಸಕ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.
ಈ ಬಗ್ಗೆ ಇತ್ತೀಚೆಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಸಿಬಿಐ ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿತ್ತು.