ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ.
ಇಂದು ರಾತ್ರಿ ಕೈ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲಾಗಿದ್ದು, ಮಾ.15 ರಂದು ಕೆಪಿಸಿಸಿ ಪದಾಧಿಕಾರಿಗಳಿಗೆ ಡಿಕೆಶಿ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ. ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಡಿಕೆಶಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಬಹಳ ಮಹತ್ವ ಪಡೆದಿದೆ.
ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಇದು ನನ್ನ ಬದುಕಿನ ಮಹತ್ವದ ಕ್ಷಣ!
ಕೆಪಿಸಿಸಿ ಅಧ್ಯಕ್ಷನಾಗಿ ಇಂದಿಗೆ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. pic.twitter.com/bZMo3yPkP1— DK Shivakumar (@DKShivakumar) March 11, 2025