ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.
ಇದೀಗ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ.
ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಏಕಾಏಕಿ ನಾಪತ್ತೆಯಾಗಿದ್ದರು, ಮುಮ್ತಾಜ್ ಅವರೇ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದ್ದು, ನಿನ್ನೆ ಅವರ BMW ಕಾರು ಕುಳೂರು ಸೇತುವೆ ಮೇಲೆ ಡ್ಯಾಮೇಜ್ ಆಗಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನಂತರ ಶವಕ್ಕಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ. ಅಥವಾ ಅಪಘಾತ ನಡೆದಿದ್ಯಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.