ಹಾಸನ : ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಹಾಸನದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್ ನಲ್ಲಿ ವಿಕಾಶ್ ಎಂಬ ವಿದ್ಯಾರ್ಥಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ, ಆತ್ಮಹತ್ಯೆಯೋ ಎಂಬುದು ಸ್ಪಷ್ಟವಾಗಿಲ್ಲ.
ವಿದ್ಯಾರ್ಥಿ ಸಾವಿನ ತನಿಖೆಗೆ ಆಗ್ರಹಿಸಿ ಸಂಬಂಧಿಕರು ಹಾಗೂ ಸ್ಥಳೀಯರು ಕಾಲೇಜಿನ ಹಾಸ್ಟೆಲ್ ಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಪಿಠೋಪಕರಣ, ಕಿಟಕಿ ಗಾಜು ಧ್ವಂಸ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ತನಿಖೆಯಿಂದಷ್ಟೇ ವಿದ್ಯಾರ್ಥಿ ಸಾವಿನ ನಿಖರ ಕಾರಣ ತಿಳಿದು ಬರಬೇಕಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.