ಬೆಂಗಳೂರು : ಯುವಕನ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತನ ಅಂಗೈ ಕತ್ತರಿಸಿರುವ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಬೈಲನರಸಾಪುರ ಗ್ರಾಮದಲ್ಲಿ ಸೈಯದ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಮಚ್ಚು ಮತ್ತು ರಾಡ್ ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಆತನ ಮುಂಗೈ ಕಟ್ ಮಾಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸೈಯದ್’ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ .