
ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಈವರೆಗೆ 51 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಈವರೆಗೆ ಭಾರೀ ಮಳೆಯಿಂದಾಗಿ 51 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಬಳಿ ಮೇಘಸ್ಪೋಟದಲ್ಲಿ 14 ಮಂದಿ ಮೃತಪಟ್ಟರೆ, ಮಂಡಿ ಜಿಲ್ಲೆಯ ಭೂಕುಸಿತದಿಂದ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 51 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ 20 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ, ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸದಿರಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಅವರು ಹೇಳಿದರು.
ರಾಜ್ಯದ ವಿವಿಧ ಸ್ಥಳಗಳಲ್ಲಿ ಪ್ರಾಣಹಾನಿ ಅತ್ಯಂತ ದುಃಖಕರವಾಗಿದೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ವಿವಿಧ ಸ್ಥಳಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದಾಗಿ ಪ್ರಾಣಹಾನಿ ಅತ್ಯಂತ ದುಃಖಕರವಾಗಿದೆ. ಎನ್ಡಿಆರ್ಎಫ್ ತಂಡಗಳು ಸ್ಥಳೀಯ ಆಡಳಿತದೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಶಾ ಟ್ವೀಟ್ ಮಾಡಿದ್ದಾರೆ.