ಎಎಪಿ ನಾಯಕ ಮತ್ತು ಅಭ್ಯರ್ಥಿ ಸತ್ಯೇಂದರ್ ಜೈನ್ ಅವರು ದೆಹಲಿ ಚುನಾವಣೆಯಲ್ಲಿ ಶಕುರ್ ಬಸ್ತಿಯಿಂದ ಬಿಜೆಪಿ ಅಭ್ಯರ್ಥಿ ಕರ್ನೈಲ್ ಸಿಂಗ್ ವಿರುದ್ಧ ಸೋತಿದ್ದಾರೆ.
ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ, ಮಧ್ಯಾಹ್ನ 1:15 ರ ವೇಳೆಗೆ ಸಿಂಗ್ 20998 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಗೆ ಸೋಲಾಗಿದೆ. ದಿಲ್ಲಿ ಸಿಎಂ ಅತಿಶಿ ಗೆಲುವು ದಾಖಲಿಸಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು.