ನವದೆಹಲಿ: ಶೀಘ್ರವೇ ದೆಹಲಿ ಸಿಎಂ ‘ಅತಿಶಿ’ ಬಂಧನವಾಗಲಿದೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಹೇಳಿಕೆ ಸಂಚಲನ ಮೂಡಿಸಿದೆ.
ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಯೋಜನೆಯಿಂದ ಕೆಲವರು ವಿಚಲಿತರಾಗಿದ್ದಾರೆ. ಅತಿಶಿ ಬಂಧನಕ್ಕೂ ಮುನ್ನ ಎಎಪಿ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸಲಾಗುತ್ತದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಿಂದ ಕೆಲವರು ವಿಚಲಿತರಾಗಿದ್ದಾರೆ. ಕಪೋಲಕಲ್ಪಿತ ಪ್ರಕರಣದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಅತಿಶಿಯನ್ನು ಬಂಧಿಸಲು ಪ್ಲ್ಯಾನ್ ಮಾಡಿದ್ದಾರೆ. ಅದಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಸಲಾಗುತ್ತದೆ’ ಎಂದು ಹೇಳಿದರು.
ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಹಿಳೆಯರು ಮತ್ತು ವೃದ್ಧರನ್ನು ಗುರಿಯಾಗಿಸಿಕೊಂಡು ಎಎಪಿ ಹಲವಾರು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ.ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡಿದ ಮಹಾರಾಷ್ಟ್ರದ ಲಾಡ್ಲಿ ಬೆಹ್ನಾ ಯೋಜನೆಯ ಮಾದರಿಯಲ್ಲಿ ಮಹಿಳಾ ಸಮ್ಮಾನ್ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಮಾಸಿಕ 1,000 ರೂ. ಎಎಪಿ ಮತ್ತೆ ಆಯ್ಕೆಯಾದರೆ ಈ ಮೊತ್ತವನ್ನು 2,100 ರೂ.ಗೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ ಎಎಪಿಯ ಆಡಳಿತ ಕಾರ್ಯಸೂಚಿಯನ್ನು ಹಳಿ ತಪ್ಪಿಸುವ ಪ್ರಯತ್ನದಲ್ಲಿ ಎಎಪಿ ನಾಯಕರ ಮೇಲೆ ದಾಳಿ ನಡೆಸಲಾಗುವುದು ಎಂದು ಕೇಜ್ರಿವಾಲ್ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಹೇಳಿದ್ದಾರೆ.
महिला सम्मान योजना और संजीवनी योजना से ये लोग बुरी तरह से बौखला गए हैं।
अगले कुछ दिनों में फ़र्ज़ी केस बनाकर आतिशी जी को गिरफ्तार करने का इन्होंने प्लान बनाया है
उसके पहले “आप” के सीनियर नेताओं पर रेड की जायेंगी
आज 12 बजे इस पर प्रेस कांफ्रेंस करूँगा।
— Arvind Kejriwal (@ArvindKejriwal) December 25, 2024