ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ನಾಯಕಿ ಕೆ.ಕವಿತಾ ಅವರು ಮಾರ್ಚ್ 23 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ವಶದಲ್ಲಿರುತ್ತಾರೆ ಎಂದು ರಾಷ್ಟ್ರ ರಾಜಧಾನಿಯ ನ್ಯಾಯಾಲಯ ಇಂದು ತಿಳಿಸಿದೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನು ಶುಕ್ರವಾರ ಹೈದರಾಬಾದ್ ನಿವಾಸದಲ್ಲಿ ದೆಹಲಿ ಮದ್ಯ ನೀತಿ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೂ ತನಿಖೆ ನಡೆಸಲಾಗುತ್ತಿದ್ದು, ಇಂದು ಕೇಜ್ರಿವಾಲ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.