ನವದೆಹಲಿ: ದೆಹಲಿಯಲ್ಲಿ ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚುತ್ತಿರುವ ನಡುವೆ ಆಮ್ ಆದ್ಮಿ ಪಕ್ಷ ಸರ್ಕಾರವು ತನ್ನ 50 ಪ್ರತಿಶತದಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ನಿರ್ದೇಶನ ನೀಡಿದೆ.
ಯೆಸ್, ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದೆ…ಈ ದೆಹಲಿ ಸಹವಾಸವೇ ಸಾಕು ಎನ್ನುವಷ್ಟು ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಉಸಿರಾಡಲು ಶುದ್ದ ಗಾಳಿ ಇಲ್ಲ. ಎಲ್ಲಿ ನೋಡಿದರೂ ಕೂಡ ವಾಯುಮಾಲಿನ್ಯ..ಮಕ್ಕಳು..ವೃದ್ದರೂ ಪಾಡಂತೂ ಹೇಳತೀರದು.
“ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮನೆಯಿಂದ ಕೆಲಸವನ್ನು ಜಾರಿಗೆ ತರಲು ನಿರ್ಧರಿಸಿದೆ. 50% ಉದ್ಯೋಗಿಗಳು ಮನೆಯಿಂದ ಕೆಲಸ ಮಾಡುತ್ತಾರೆ. ಇದರ ಅನುಷ್ಠಾನಕ್ಕಾಗಿ, ಇಂದು ಮಧ್ಯಾಹ್ನ 1 ಗಂಟೆಗೆ ಸಚಿವಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು” ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಹೆಚ್ಚುತ್ತಿರುವ ವಾಯುಮಾಲಿನ್ಯದ ನಡುವೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಮಂಗಳವಾರ ಎಲ್ಲಾ ಸರ್ಕಾರಿ ನೌಕರರಿಗೆ ಕಚೇರಿ ಸಮಯವನ್ನು ಬದಲಾಯಿಸಲು ನಿರ್ದೇಶನ ನೀಡಿದ್ದಾರೆ.ದೆಹಲಿ ಸರ್ಕಾರ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಡಿಯಲ್ಲಿನ ಎಲ್ಲಾ ಕಚೇರಿಗಳು ಪರಿಷ್ಕೃತ ವೇಳಾಪಟ್ಟಿಯನ್ನು ಅನುಸರಿಸುತ್ತವೆ. ಎಂಸಿಡಿ ಕಚೇರಿಗಳು ಬೆಳಿಗ್ಗೆ 8:30 ರಿಂದ ಸಂಜೆ 5:00 ರವರೆಗೆ ಕಾರ್ಯನಿರ್ವಹಿಸಿದರೆ, ದೆಹಲಿ ಸರ್ಕಾರಿ ಕಚೇರಿಗಳು ಬೆಳಿಗ್ಗೆ 10:00 ರಿಂದ ಸಂಜೆ 6:30 ರವರೆಗೆ ಕಾರ್ಯನಿರ್ವಹಿಸುತ್ತವೆ. ಈ ಆದೇಶವು ಫೆಬ್ರವರಿ 28, 2025 ರವರೆಗೆ ಜಾರಿಯಲ್ಲಿರುತ್ತದೆ.
प्रदुषण कम करने के लिए दिल्ली सरकार ने सरकारी दफ़्तरो में वर्क फ्रॉम होम का लिया निर्णय
50% कर्मचारी करेंगे घर से काम
इसके इम्पलिमेंटेशन के लिए सचिवालय में आज दोपहर 1 बजे अधिकारियों के साथ होगी बैठक
— Gopal Rai (@AapKaGopalRai) November 20, 2024