ಬೆಂಗಳೂರು : 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬುವವರು ದೂರು ನೀಡಿದ್ದಾರೆ.
2019 ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತಕ್ಷಣಕ್ಕೆ 50 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇದನ್ನು ಕೊಡಲು ನಿರಾಕರಿಸಿದ ಹಿನ್ನೆಲೆ ನನ್ನ ಉದ್ಯಮ ಹಾಗೂ ನನ್ನ ಜೀವಕ್ಕೆ ಸಂಚಕಾರ ತರುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ಟಾಟಾ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಸಂಚಲನ ಸೃಷ್ಟಿಸಿದೆ. ಇದಕ್ಕೆ ಹೆಚ್ ಡಿ ಕುಮಾರಸ್ವಾಮಿ ಯಾವ ರೀತಿಯ ಪ್ರತಿಕ್ರಿಯೆ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.