ಬೆಂಗಳೂರು : ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ Basanagouda Patil Yatnal ವಿರುದ್ಧ ದೂರು ದಾಖಲಾಗಿದೆ.
ಮುಂಚೂಣಿ ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಾಂಗ್ರೆಸ್ ನಾಯಕ, ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ‘ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ’ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಯತ್ನಾಳ್ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ.
ಯತ್ನಾಳ್ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಟ್ವೀಟ್ ಮಾಡಿದೆ.