ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪುಂಡ ವಿರುದ್ಧ ಎಫ್ ಐ ಆರ್ ( FIR) ದಾಖಲಾಗಿದೆ.
ಬೋವಿ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕುಂಬಳಗೋಡು ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ . ಪದ್ಮಾ ಈ ದೂರು ನೀಡಿದ್ದಾರೆ. SC, ST ದೌರ್ಜನ್ಯ ಕಾಯಿದೆಯಡಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಹಾಕುವಂತೆ ಆಗ್ರಹಿಸಲಾಗಿದೆ. ಡ್ರೋನ್ ಪ್ರತಾಪ್ ಹಾಗೂ ತನಿಷಾ ನಡುವೆ ನಡೆದ ಸಂಭಾಷಣೆ ವೇಳೆ ‘ವಡ್ಡ’ ಎಂಬ ಪದ ಬಳಕೆ ಮಾಡಿದ್ದಾರೆ, ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಪದ್ಮಾ ಆಗ್ರಹಿಸಿದ್ದಾರೆ.
ತನಿಷಾ ಕುಪ್ಪಂಡ ಕನ್ನಡ ಚಿತ್ರರಂಗದ ನಟಿ. ಮೂಲತಃ ಕೊಡಗಿನವರಾದ ಇವರು ಮಂಗಳಗೌರಿ ಮದುವೆ’ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿಕೊಟ್ಟ ಇವರು ಬಾಡಿಗಾರ್ಡ್, ಉಂಡೆನಾಮ, ಪೆಂಟಗನ್ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ತನಿಷಾ ಸದ್ಯ ಬಿಗ್ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ.