ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಮೊದಲ ದಿನವೇ ರಾಮ ಮಂದಿರ ಪ್ರವೇಶ ಬಂದ್ ಆಗಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಅಯೋಧ್ಯೆ ರಾಮ ಮಂದಿರವನ್ನು ಇಂದು ಸಾರ್ವಜನಿಕರಿಗೆ ತೆರೆಯಲಾಗಿದ್ದು, ಮುಂಜಾನೆಯಿಂದ ಭಕ್ತರ ಭಾರಿ ನೂಕುನುಗ್ಗಲು ಉಂಟಾಗಿದೆ. ಈ ಹಿನ್ನೆಲೆ ಅಯೋಧ್ಯೆ ರಾಮ ಮಂದಿರಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಉನ್ನತ ರಾಜಕಾರಣಿಗಳು, ಕ್ರೀಡಾಪಟುಗಳು, ಉದ್ಯಮಿಗಳು ಮತ್ತು ಭಾರತದ ಚಲನಚಿತ್ರ ಸೆಲೆಬ್ರಿಟಿಗಳ ಉಪಸ್ಥಿತಿಯಲ್ಲಿ ಜನವರಿ 22 ರಂದು ಆಯೋಜಿಸಲಾದ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಅಯೋಧ್ಯೆ ರಾಮ ಮಂದಿರ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿತ್ತು.
ಕೊರೆವ ಚಳಿಯ ನಡುವೆಯೂ ದೇವಾಲಯದ ಸಂಕೀರ್ಣದ ಹೊರಗೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದರು. ಇಂದು ಬೆಳಗ್ಗೆ 3 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ರಾಮಮಂದಿರದಲ್ಲಿ ನೂಕು ನುಗ್ಗಲು ಉಂಟಾದ ಹಿನ್ನೆಲೆ ತಾತ್ಕಾಲಿಕವಾಗಿ ಭಕ್ತರ ಪ್ರವೇಶ ಬಂದ್ ಮಾಡಲಾಗಿದೆ.