ಉತ್ತರ ಕನ್ನಡ : ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.
ಈ ಹಿನ್ನೆಲೆ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆಯಲ್ಲಿ ಭಾರಿ ಅಡಚಣೆ ಉಂಟಾಗಿದ್ದು, ರೋಗಿಗಳು ಪರದಾಡುತ್ತಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ರೋಗಿಯೋರ್ವ ಮೃತಪಟ್ಟಿದ್ದಾರೆ. ಮೃತರನ್ನು ಗುಂಜಾವತಿ ಗ್ರಾಮದ ಸೈಯದ್ ಮೊಹಮ್ಮದ್ ಗೌಸ್ (58) ಎಂದು ಗುರುತಿಸಲಾಗಿದೆ.
ಮೃತರು ಎರಡು ತಿಂಗಳಿಂದ ಮುಂಡಗೋಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೈಯದ್ ಡೆಯಾಲಿಸಿಸ್ ಮಾಡಿಸುತಿದ್ದರು, ಆದರೆ ಡಯಾಲಿಸಿಸ್ ನೌಕರರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ