ಬೆಂಗಳೂರು : ತಂದೆ-ತಾಯಿ ಇಲ್ಲದ ಅನಾಥ ಮಕ್ಕಳಿಗೆ ರಾಜ್ಯದ ವಸತಿ ಶಾಲೆಗಳಲ್ಲಿ ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ತಂದೆ ತಾಯಿ ಇಲ್ಲದ ಮಕ್ಕಳನ್ನು ಭಿಕ್ಷಾಟಣೆ ಮತ್ತು ಇತರೆ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ ತಂದೆ ತಾಯಿ ಇಲ್ಲದ ಮಕ್ಕಳಿಗೆ ನೇರ ಪ್ರವೇಶಾತಿ ಕಲ್ಪಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಇವರು ಸುತ್ತೋಲೆ ಹೊರಡಿಸಿದ್ದಾರೆ.
