ಬೆಂಗಳೂರು : ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಹಣದ ಬದಲು ಅಕ್ಕಿ ನೀಡಲಾಗುತ್ತದೆ ಎಂದು ಅವರು ಹೇಳಿದರು.
ಅನ್ನಭಾಗ್ಯದ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅನ್ನಭಾಗ್ಯ ಫಲಾನುಭವಿಗಳಿಗೆ ಹಣದ ಬದಲು ಇನ್ಮುಂದೆ 10 K.G ಅಕ್ಕಿ ಕೊಡಲು ಸರ್ಕಾರ ನಿರ್ಧರಿಸಿದೆ. ಹೆಚ್ಚುವರಿ 5 ಕೆಜಿ ಅಕ್ಕಿಗೆ ಫಲಾನುಭವಿಗಳಿಗೆ 170 ರೂ ನೀಡಲಾಗುತ್ತಿತ್ತು. ಸದ್ಯ ಇದನ್ನು ಸ್ಥಗಿತಗೊಳಿಸಿ ಅಕ್ಕಿಯನ್ನೇ ಕೊಡಲು ಸರ್ಕಾರ ಮುಂದಾಗಿದೆ.
‘ಅನ್ನ ಭಾಗ್ಯ’ ಫಲಾನುಭವಿಗಳಿಗೆ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ ಬರುತ್ತಿದ್ದ 170 ರೂಪಾಯಿ ಹಣ ಕಳೆದ ಕೆಲವು ತಿಂಗಳಿನಿಂದ ಪಾವತಿಯಾಗಿಲ್ಲ. 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ 170 ರೂಪಾಯಿ ಪಾವತಿಸುತ್ತಿತ್ತು. ಧಾನಸಭಾ ಚುನಾವಣೆಗೆ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ಕೆಜಿ ಅಕ್ಕಿಯನ್ನು ಬಡತನ ರೇಖೆಗಿಂತ ಕೆಳಗಿರುವ ನಾಗರಿಕರಿಗೆ ನೀಡುವುದಾಗಿ ಘೋಷಿಸಿದ್ದರು, ಆದರೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ವಿತರಿಸಬೇಕಾದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಅದಕ್ಕೆ ಸರ್ಕಾರವು ಎಲ್ಲಾ ಕಾರ್ಡ್ ಹೊಂದಿರುವವರಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ 5 ಕೆಜಿಗೆ 170 ರೂಪಾಯಿ ನಗದು ನೀಡಲು ನಿರ್ಧರಿಸಿತ್ತು.ಇದೀಗ ಹಣದ ಬದಲು ಅಕ್ಕಿಯನ್ನೇ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.