alex Certify BREAKING : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ದಾವಣಗೆರೆಯಲ್ಲಿ ನಡೆದ  ರಾಜ್ಯ  ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ, ಈ ಬಗ್ಗೆ ಬಜೆಟ್ ನಲ್ಲಿ ಘೋಷಿಸಲು ನಿರ್ಧರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾತಂತ್ರ್ಯಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ. ಜನ ಸಾಮಾನ್ಯರು ಪತ್ರಿಕಾವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.

ಪತ್ರಿಕಾವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಸಾಧನೆ ಮಾಡಿದ ಹಲವು ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...