ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಓಪನ್ ಆಗಿದ್ದು, ದೇವಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತುರರಾಗಿದ್ದಾರೆ. ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ನೇತೃತ್ವದಲ್ಲಿ ಓಪನ್ ಆಗುತ್ತಿದೆ.
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತರಿಗೆ ತೊಂದರೆಯಾಗದಂತೆ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 15 ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಶಕ್ತಿ ಯೋಜನೆಯಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಹಾಸನಾಂಬೆಗೆ ಹಿಂದಿನ ವರ್ಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳುತ್ತಾರೆ.
ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲಾಗಿದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಿಂದಿನ ವರುಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳುತ್ತಾರೆ.