ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ದೋಸ್ತಿಗಳು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ.
ಬಿಡದಿಯಿಂದ ಇಂದು ಮತ್ತೆ ಪಾದಯಾತ್ರೆ ಆರಂಭವಾಗಿದ್ದು, 2 ನೇ ದಿನದ ಪಾದಯಾತ್ರೆಗೆ ಬಿ,ವೈ ವಿಜಯೇಂದ್ರ ಚಾಲನೆ ನೀಡಿದ್ದಾರೆ. ಬಿಡದಿಯಿಂದ ರಾಮನಗರದವರೆಗೆ ಇಂದು ಪಾದಯಾತ್ರೆ ನಡೆಯಲಿದೆ.
ಮೊದಲನೇ ದಿನದ ಪಾದಯಾತ್ರೆ ಯಶಸ್ವಿಯಾಗಿದೆ. ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಇದಕ್ಕೆ ಅವರು ಸದನದಲ್ಲಿ ಉತ್ತರ ಕೊಡಬೇಕು , ರಾಜ್ಯದ ಜನರ ಪರವಾಗಿ ನಾವು ಪ್ರಶ್ನೆ ಕೇಳುತ್ತಿದ್ದೇವೆ, ಉತ್ತರ ಕೊಡುವವರೆಗೂ ನಾವು ಬಿಡಲ್ಲ ಎಂದರು.
ನಿನ್ನೆ ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಇದಾದ ಬಳಿಕ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ಹೊರಟಿದ್ದರು.