
ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರ ಆಪ್ತ ಕಾರ್ಯದರ್ಶಿಯಾಗಿ ಡಾ.ಮುಜುದ್ದೀನ್ ಖಾನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆರ್ಥಿಕ ಇಲಾಖೆ ಖಜಾನೆ ಆಯುಕ್ತಾಲಯ ಉಪ ನಿರ್ದೇಶಕರಾಗಿದ್ದ ಡಾ| ಮಾಜುದ್ದೀನ್ ಖಾನ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರ ಅಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮೇಲೆ ನೇಮಿಸಿದ್ದು, ಕರ್ನಾಟಕ ಉರ್ದು ಅಕಾಡೆಮಿ ರಿಜಿಸ್ಟ್ರಾರ್ ಆಗಿಯೂ ಅಧಿಕ ಪ್ರಭಾರದಲ್ಲಿರಿಸಿ ಆದೇಶಿಸಿದೆ.
