
ಬೆಂಗಳೂರು : ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇತ್ತೀಚೆಗೆ ಬಿಲ್ಲವ, ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಹರಿಪ್ರಸಾದ್,ನನಗೆ ಸಿಎಂ ಮಾಡುವುದೂ ಗೊತ್ತು. ಅಧಿಕಾರದಿಂದ ಇಳಿಸುವುದೂ ಗೊತ್ತು ಎಂದು ಹೇಳಿದ್ದರು. ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ನಡುವೆ ನಿನ್ನೆ ರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.