ತುಮಕೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಡಿವೈಎಸ್ ಪಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಭದ್ರತೆಗಾಗಿ ಬಂದಿದ ಡಿವೈಎಸ್ ಪಿ ಚಂದ್ರಶೇಖರ್ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ನೂಕಾಟ, ತಳ್ಳಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಹಲ್ಲೆಯಿಂದ ಡಿವೈಎಸ್ ಪಿ ಚಂದ್ರಶೇಖರ್ ಅವರ ಮೂಗಿಗೆ ಗಾಯವಾಗಿದ್ದು, ರಕ್ತಬರುವಂತೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.