ಮೈಸೂರು : ‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಡಿ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ.
ಮುಡಾ ಕಚೇರಿ ಹಾಗೂ ಮುಡಾ ಹಗರಣದ ಎ-4 ಆರೋಪಿ, ಭೂ ಮಾಲೀಕ ದೇವರಾಜು ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಮೈಸೂರಿಗೆ ಎಂಟ್ರಿ ಕೊಟ್ಟಂತಹ 20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ದಾಖಲೆಗಳನ್ನು ಜಾಲಾಡಿದ್ದಾರೆ. ಭೂ ಮಾಲೀಕ ದೇವರಾಜು ಮನೆ ಮೇಲೂ ದಾಳಿ ನಡೆಸಿದ್ದು, ಅಲ್ಲೂ ಕೂಡ ದಾಖಲೆಗಳ ಪರಿಶೀಲನೆ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾವ ರೀತಿ ಪ್ರತಿಕ್ರಿಯೆ ಕೊಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.