ಕೊಡಗು : ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಇಂದು ಬೆಳಗ್ಗೆ 10:30 ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎನ್ನಲಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭೂ ವಿಜ್ಞಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.