alex Certify BREAKING NEWS: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 2.7 ರಷ್ಟು ತೀವ್ರತೆ ದಾಖಲಾಗಿದೆ. ಸಂಜೆ 4:40ರ ಸುಮಾರಿಗೆ ದೆಹಲಿಯಲ್ಲಿ ಭೂಕಂಪ ಸಂಭವಿಸಿದೆ. ನಿನ್ನೆ ರಾತ್ರಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪನ ಉಂಟಾಗಿತ್ತು.

ದೆಹಲಿಯಲ್ಲಿ ಬುಧವಾರ ಸಂಜೆ 4:42 ರ ಸುಮಾರಿಗೆ ಮತ್ತೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ನವದೆಹಲಿಯ 5 ಕಿಮೀ ಆಳದಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿದೆ.

ಮಂಗಳವಾರ ರಾತ್ರಿ 10:17 ರ ಸುಮಾರಿಗೆ 6.6 ತೀವ್ರತೆಯ ಭೂಕಂಪದ ನಂತರ ಉತ್ತರ ಭಾರತ ಭಾಗಗಳಲ್ಲಿ ಕಂಪನ ಉಂಟಾಗಿತ್ತು. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇದು 156 ಕಿಮೀ ಆಳದಲ್ಲಿ ಕೇಂದ್ರಬಿಂದು ಕಂಡು ಬಂದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...