ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಭೂಕಂಪ ಸಂಭವಿಸಿದ್ದು, ಭಾರಿ ಮಳೆ ಮತ್ತು ಭೂಕುಸಿತದ ನಡುವೆ ಭೂಕಂಪನದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.9ರಷ್ಟಿತ್ತು.
ಜಮ್ಮು ಕಾಶ್ಮೀರದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈ ನಡುವೆ ಜಮ್ಮುಕಾಶ್ಮೀರದಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇದಕ್ಕೂ ಮುನ್ನ 12.10 ರ ಸುಮಾರಿಗೆ ಅಫ್ಘಾನಿಸ್ತಾನದ ಫೈಜಾಬಾದ್ನ ಆಗ್ನೇಯಕ್ಕೆ 93 ಕಿ.ಮೀ ದೂರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳ 180 ಕಿಲೋಮೀಟರ್ ಆಗಿತ್ತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಈ ಮಾಹಿತಿಯನ್ನು ನೀಡಿತು.