ಮೈಸೂರು : ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ತಪಾಸಣೆ ನಡೆಸಿದ್ದಾರೆ.
20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮೈಸೂರಿನ ಮುಡಾ ಕಚೇರಿಗೆ ದೌಡಾಯಿಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ಪತ್ನಿ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಸೈಟ್ ಪಡೆದಿದ್ದಾರೆ. ಹಲವಾರು ಅಕ್ರಮ ನಡೆದಿದೆ ಎಂಬ ದೂರು ಆಧರಿಸಿ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮುಡಾ ಹಗರಣ ರಾಜ್ಯ ಮಾತ್ರವಲ್ಲದೇ ರಾಷ್ಟ್ರವ್ಯಾಪ್ತಿಯಲ್ಲಿ ಭಾರಿ ಸುದ್ದಿಯಾಗಿತ್ತು. ಮುಡಾ ಹಗರಣದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಯುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿತ್ತು.