ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಭೂ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಆರಂಭಿಸಿದ್ದಾರೆ.ಇದರ ನಡುವೆ ಇಡಿ ದಾಳಿ ನಡೆದಿದೆ.
ಆರ್ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ. ತನಿಖೆಯ ಭಾಗವಾಗಿ 20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಪ್ರಸ್ತುತ ಮುಡಾ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.