ಬೆಂಗಳೂರು : ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಬಿಲ್ಡರ್ ಗಳಿಗೆ ಇಂದು ಬೆಳ್ಳಂ ಬೆಳಗ್ಗೆ ಜಾರಿ ನಿರ್ದೇಶನಾಲಯ ( ಇಡಿ) ಶಾಕ್ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನ 11 ಕಡೆ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿದ ಇಡಿ ಪರಿಶೀಲನೆ ನಡೆಸಿದೆ.
ಬೆಂಗಳೂರು ನಗರದ ಮಲ್ಲೇಶ್ವರಂ, ಬನ್ನೇರುಘಟ್ಟ ರೋಡ್, ಹನುಮಂತನಗರ ಸೇರಿದಂತೆ ಹಲವು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಿಲ್ಡರ್ ಗಳು ಸೈಟ್ ಕೊಡಿಸುವುದಾಗಿ ವಂಚಿಸಿ ಅವ್ಯವಹಾರ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆ ಹಲವು ಕಡೆ ದಾಳಿ ನಡೆಸಲಾಗಿದೆ. ದಾಳಿ ನಡೆಸಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎನ್ನಲಾಗಿದೆ.