alex Certify BREAKING : 1-10 ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ‘ಶಿಕ್ಷಣ ಇಲಾಖೆ’ ಆದೇಶ, ಕೆಲವು ಪಾಠಗಳಿಗೆ ಕೊಕ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 1-10 ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ‘ಶಿಕ್ಷಣ ಇಲಾಖೆ’ ಆದೇಶ, ಕೆಲವು ಪಾಠಗಳಿಗೆ ಕೊಕ್..!

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸದ್ದಿಲ್ಲದೇ 2024-25 ಸಾಲಿನ ಪಠ್ಯಪುಸ್ತಕವನ್ನು ಪರಿಷ್ಕರಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಶಾಲಾ ಶಿಕ್ಷಣ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಪರಿಷ್ಕರಣಾ ಸಮಿತಿಯು ಮುಖ್ಯವಾಗಿ ಈ ಕೆಳಕಂಡ ಅಂಶಗಳಿಗೆ ಆದ್ಯತೆಯನ್ನು ನೀಡಿ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ.

1. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ, ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ.

2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ “2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ’ ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ.

3. ವಿವಿಧ ಸಂಘಟನೆಗಳು, ವ್ಯಕ್ತಿಗಳು ಹಾಗೂ ಸರ್ಕಾರದ ಇಲಾಖೆಗಳು ಪಠ್ಯಪುಸ್ತಕದಲ್ಲಿ ನಿರ್ದಿಷ್ಟ ವಿಷಯಾಂಶವನ್ನು ಅಳವಡಿಸುವ/ಕೈಬಿಡುವ/ಪರಿಷ್ಕರಿಸುವ ಕುರಿತು ಮಾಡಿದ ಎಲ್ಲಾ ಮನವಿಗಳನ್ನು ಪರಿಶೀಲಿಸಿ ಸೂಕ್ತವೆನಿಸಿದ ಸಲಹೆಗಳನ್ನು ಪರಿಷ್ಕರಣೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

4. ವಿಷಯಾಂಶಗಳಿಗೆ ಸಂಬಂಧಿಸಿದಂತೆ, ಪಠ್ಯಪುಸ್ತಕದಲ್ಲಿರುವ ಅಂಕಿ ಅಂಶಗಳನ್ನೂ, ಮಾಹಿತಿಗಳನ್ನು, ನಕ್ಷೆಗಳನ್ನು, ಚಿತ್ರಗಳು ಮತ್ತು ವ್ಯಾಕಾರಣಾಂಶಗಳನ್ನು ಅಗತ್ಯವಿರುವ ಕಡೆ ಪರಿಷ್ಕರಿಸಲಾಗಿದೆ. 5. ಮಕ್ಕಳ ಪಠ್ಯಪುಸ್ತಕದ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಪಠ್ಯಪುಸ್ತಕಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ
ಎರಡು ಸಂಪುಟಗಳಾಗಿ ವಿಭಾಗಿಸುವ ಸರ್ಕಾರದ ನಿರ್ಣಯಕ್ಕೆ ಅನುಸಾರವಾಗಿ, ಎರಡೂ ಸಂಪುಟಗಳಲ್ಲಿನ
ಕಲಿಕಾಂಶಗಳು/ಪಾಠಗಳು ಸರಳತೆಯಿಂದ ಸಂಕೀರ್ಣತೆಯೆಡೆಗೆ ಸಾಗುವಂತೆ ವ್ಯವಸ್ಥಿತವಾಗಿ ಅಳವಡಿಸಲಾಗಿದೆ.

6. ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಪ್ರಮುಖ ಸಾಹಿತಿಗಳಿಗೆ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳಿಗೂ ಪ್ರಾಶಸ್ತ್ರ ನೀಡಲಾಗಿರುತ್ತದೆ.

7. ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ, ಸ್ಪರ್ಧಾತ್ಮಕ ಪರೀಕ್ಷಾ ದೃಷ್ಟಿಯಿಂದ ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಕೆಲವು ಹೊಸ ಅಧ್ಯಾಯಗಳು, ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಪರಿಷ್ಕರಿಸಿರುವ ಪ್ರಮುಖ ಅಂಶಗಳು

ಸಮಾಜ ವಿಜ್ಞಾನ ಪರಿಷ್ಕೃತ ಪಠ್ಯಪುಸ್ತಕಗಳು ಸಂವಿಧಾನದ ಪ್ರಸ್ತಾವನೆ, ಲಿಂಗ ಸೂಕ್ಷ್ಮತೆ, ಮಕ್ಕಳ ಹಕ್ಕುಗಳ ಕುರಿತ ಮಾಹಿತಿ, ಪ್ರಜಾಸತ್ತಾತ್ಮಕ ಮತ್ತು ಜಾತ್ಯಾತೀತ ಮೌಲ್ಯಗಳು ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಗಮನದಲ್ಲಿಟ್ಟುಕೊಂಡು ಈ ಕೆಳಕಂಡಂತೆ ಪರಿಷ್ಕರಿಸಲಾಗಿದೆ.

6ನೇ ತರಗತಿ
• ಇತಿಹಾಸದ ಪರಿಚಯ ಮತ್ತು ಆರಂಭಿಕ ಸಮಾಜದ ಕುರಿತ ಮಾಹಿತಿ ಇರುವ ಅಧ್ಯಾಯವನ್ನು ಹೊಸದಾಗಿ ಸೇರಿಸಲಾಗಿದೆ.
• ‘ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಅಧ್ಯಾಯದಲ್ಲಿ ಎಲ್ಲಾ ಮಾಹಿತಿಗಳನ್ನು ನವೀಕರಿಸಲಾಗಿದೆ ಹಾಗೂ ಹೊಸ ಚಿತ್ರಗಳು ಮತ್ತು ವಿವರಣೆಗಳನ್ನು ಸೇರಿಸಲಾಗಿದೆ. ಚಂದ್ರಶೇಖರ್ ಕಂಬಾರ, ನಾಲ್ವಡಿ ಕೃಷ್ಣರಾಜ ಒಡೆಯರ್, ಎಚ್.ಎಲ್. ನಾಗೇಗೌಡ, ಡಾ. ಸಿದ್ದಲಿಂಗಯ್ಯ, ಶ್ರೀ ಸಿದ್ದೇಶ್ವರ ಸ್ವಾಮಿ, ಶ್ರೀ ಶಾಂತವೇರಿ ಗೋಪಾಲಗೌಡರ ಹಾಗೂ ಕೊಪ್ಪಳದ ಗವಿಮಠದ ಭಾವಚಿತ್ರಗಳನ್ನು ವಿವರಗಳೊಂದಿಗೆ ಸೇರಿಸಲಾಗಿದೆ.
• ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು ಮತ್ತು ಉತ್ತರ ಭಾರತದ ರಾಜ ಮನೆತನಗಳನ್ನು ಕ್ರಮವಾಗಿ ಒಂದೆಡೆ ತಂದು ಚರ್ಚಿಸಿ, ರಾಜಮನೆತನಗಳ ಪಟ್ಟಿಯನ್ನು ಸೇರಿಸಲಾಗಿದೆ.
• ‘ದಕ್ಷಿಣ ಭಾರತದ ಪ್ರಾಚೀನ ರಾಜವಂಶಗಳು’ ಅಧ್ಯಾಯದಲ್ಲಿ ‘ಗುಳ್ಳಕಾಯಜ್ಜಿಯ ಕಥೆ’ ಎಂಬ ಜಾನಪದ ಕಥೆ ಪಠ್ಯಕ್ಕೆ ಪೂರಕವಾಗದ ಕಾರಣಕ್ಕೆ ಕೈಬಿಡಲಾಗಿದೆ.
• ತಿದ್ದೋಲೆಯ ಪ್ರಕಾರ ‘ವೇದ ಕಾಲದ ಸಂಸ್ಕೃತಿ’ ಮತ್ತು ‘ಹೊಸ ಧರ್ಮಗಳ ಉದಯ’ ಪಾಠಗಳನ್ನು ಸೇರಿಸಲಾಗಿದೆ.
• ಪೌರ ಮತ್ತು ಪೌರತ್ವ ಪಾತವನ್ನು ಲಿಂಗ ಸಮಾನತೆಯ ನೆಲೆಯಲ್ಲಿ ಪರಿಷ್ಕರಿಸಲಾಗಿದೆ. ನಮ್ಮ ಸಂವಿಧಾನ ಪಾಠದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಭಾಗಿಯಾದ ಮಹಿಳಾ ಸದಸ್ಯರ ವಿವರ ಮತ್ತು ಭಾವಚಿತ್ರವನ್ನು ಸೇರಿಸಲಾಗಿದೆ.
ಸಮಾನತೆಯ ಹಕ್ಕನ್ನು ಚರ್ಚಿಸುವಾಗ ಲಿಂಗತ್ವ ಅಲ್ಪಸಂಖ್ಯಾತರಿಗೆ ಇರುವ ಅವಕಾಶಗಳನ್ನು ಸೇರಿಸಲಾಗಿದೆ.
• ‘ಸ್ಥಳೀಯ ಆಡಳಿತ’ ದ ಬದಲಿಗೆ ಹೆಚ್ಚು ವಿಸ್ತಾರವಾದ ಹಿನ್ನೆಲೆಯನ್ನು ಒದಗಿಸುವ ‘ಪ್ರಭುತ್ವದ ಪ್ರಕಾರಗಳು’ ಅಧ್ಯಾಯವನ್ನು ಸೇರಿಸಲಾಗಿದೆ. ‘ಸ್ಥಳೀಯ ಆಡಳಿತ’ವು 8ನೇ ತರಗತಿಯ ‘ಸ್ಥಳೀಯ ಸ್ವಯಂ ಸರ್ಕಾರ’ ಅಧ್ಯಾಯದ ಪುನರಾವರ್ತನೆ ಆಗಿರುವುದರಿಂದ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
• ‘ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕು-ಕರ್ತವ್ಯಗಳು’ ಅಧ್ಯಾಯವನ್ನು ತಿದ್ದುಪಡಿ ಮಾಡಿ, ಮಕ್ಕಳ ಹಕ್ಕುಗಳನ್ನು ಸೇರಿಸಲಾಗಿದೆ.
ಅಧ್ಯಾಯಗಳು ಹಾಗೂ ವಿವರಣೆಗಳನ್ನು ವಿಷಯಾನುಕ್ರಮದಲ್ಲಿ ಮರುಜೋಡಣೆ ಮಾಡಲಾಗಿದೆ.
ಭೂಪಟಗಳನ್ನು ನವೀಕರಿಸಲಾಗಿದೆ. ಜಿಲ್ಲೆ, ತಾಲ್ಲೂಕು, ಹೋಬಳಿ ಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ನವೀಕರಿಸಲಾಗಿದೆ.

7ನೇ ತರಗತಿ

• ಭಾರತಕ್ಕೆ ಐರೋಪ್ಯರ ಆಗಮನ ಮತ್ತು ಬ್ರಿಟೀಷ್ ಆಳ್ವಿಕೆಯ ಪರಿಣಾಮಗಳು ಪಾಠದ ವಿವರಣೆಯಲ್ಲಿ ಸ್ಪಷ್ಟತೆಯನ್ನು ತರಲು 2017-18ರ ಪರಿಷ್ಕರಣ ಪಠ್ಯಪುಸ್ತಕದಲ್ಲಿನ ಮಾಹಿತಿಗಳನ್ನು ಪಡೆದು ಮರು ನಿರೂಪಿಸಲಾಗಿದೆ.

• ತಿದ್ದೋಲೆಯಂತೆ ‘ಮೈಸೂರು ಮತ್ತು ಇತರ ಸಂಸ್ಥಾನಗಳು’ ಅಧ್ಯಾಯವನ್ನು ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಎಂಬ ಅಧ್ಯಾಯವನ್ನು ಸೇರ್ಪಡೆ ಮಾಡುವುದರೊಂದಿಗೆ ಸ್ವಾತಂತ್ರ್ಯ ಚಳುವಳಿಯ ನಿರೂಪಣೆಯಲ್ಲಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ಸೇರಿಸಲಾಗಿದೆ.
ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ರೆಂದು ದಾಖಲಿಸಲಾಗಿದೆ.

‘ರಿಲಿಜಿಯನ್’ ಗಳು ಎಂಬ ಶೀರ್ಷಿಕೆಯನ್ನು ‘ಧರ್ಮಗಳು’ ಎಂದು ಬದಲಾಯಿಸಲಾಗಿದೆ.
ಪೌರನೀತಿಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳನ್ನು ಪರಿಚಯಿಸುವ ಅಧ್ಯಾಯವನ್ನು ಸೇರಿಸಲಾಗಿದೆ.

ಸಂಪೂರ್ಣ ಮಾಹಿತಿಗಾಗಿ ಸುತ್ತೋಲೆ ವೀಕ್ಷಿಸಿ

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...