ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ‘ಮುನಿರತ್ನ’ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು ಕಾರಿನ ಮೇಲೆ ಕಲ್ಲು ತೂರಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಗಲಾಟೆ ನಡೆದಿದೆ.ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯಾರು..? ಯಾಕೆ ಇಂತಹ ಕೃತ್ಯ ಎಸಗಿದ್ದಾನೆ ಎಂದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆಂದು ಶಾಸಕ ಮುನಿರತ್ನ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಕೆಲವರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ ಎಂದು ಮುನಿರತ್ನ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದಾರೆ.