ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು, ಓರ್ವ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ .ಗೌರಿಬಿದನೂರು ನಗರದ ಶಾರದಾ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಎಂಬಾತ ಮೃತಪಟ್ಟರೆ, 10 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೀಡಾಕೂಟಕ್ಕೆ ಹಾಕಿದ್ದ ಪೆಂಡಾಲ್ ಗೆ ವಿದ್ಯುತ್ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.