ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಿಸಿ ‘KERC’ ಆದೇಶ ಹೊರಡಿಸಿದೆ.
ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಇದೀಗ ಕೆಇಆರ್ ಸಿ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ವ್ ಎಸ್ಕಾಮ್ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ. ಏಪ್ರಿಲ್ 1ರಿಂದಲೇ ಕೆಇಆರ್ ಸಿ ಹೊಸ ದರ ಜಾರಿಗೆ ಬರಲಿದೆ.