ಡಿಜಿಟಲ್ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದರೆ,ಮೂವರು ಪೊಲೀಸ್ ಸಿಬ್ಬಂದಿ ಸಹ ಪ್ರಾಣ ಕಳೆದುಕೊಂಡಿದ್ದಾರೆ.
ಭಾರತೀಯ ಸೇನೆಯ ಇಬ್ಬರು ಮತ್ತು ಪೊಲೀಸರ ನಾಲ್ವರು ಸೇರಿದಂತೆ ಆರು ಸೈನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿರಾನಗರ್ ಸೆಕ್ಟರ್ನಲ್ಲಿ ಭಾನುವಾರ ಎನ್ಕೌಂಟರ್ ನಡೆದ ಸ್ಥಳದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ರಾಜ್ಬಾಗ್ನ ಘಾಟಿ ಜುಥಾನಾ ಪ್ರದೇಶದ ಜಖೋಲೆ ಗ್ರಾಮದ ಬಳಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆ ಭಯೋತ್ಪಾದಕರನ್ನು ಗುರುತಿಸಿದಾಗ ಗುಂಡಿನ ಚಕಮಕಿ ಭುಗಿಲೆದ್ದಿದೆ.ಎರಡೂ ಕಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರು ಭಾನುವಾರ ಈ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿಯಲ್ಲಿ ತೊಡಗಿದ್ದ ಅದೇ ಗುಂಪು ಎಂದು ಹೇಳಲಾಗಿದೆ.