ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್ ಯೋಧ) ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಹಾಗೂ ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಅಡಗಿದ್ದ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್ಪಿಎಫ್ ಜವಾನ್ ಕಬೀರ್ ದಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುವಿನಿಂದ 60 ಕಿ.ಮೀ ದೂರದಲ್ಲಿರುವ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಅಂತರರಾಷ್ಟ್ರೀಯ ಗಡಿಯ ಬಳಿಯ ಗ್ರಾಮದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ನಾಗರಿಕನನ್ನು ಗಾಯಗೊಳಿಸಿದ್ದಾರೆ.