ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತು ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಕಿಶ್ತ್ವಾರ್ ಜಿಲ್ಲೆಯಲ್ಲಿ, ಶುಕ್ರವಾರ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ ಸೇರಿದಂತೆ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ.
ಬಾರಾಮುಲ್ಲಾದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆಗೈದಿವೆ. ಚಕ್ ಟ್ಯಾಪರ್ ಪ್ರದೇಶದ ಕಟ್ಟಡವೊಂದರಲ್ಲಿ ಸುಮಾರು 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಜಂಟಿ ಸೇನೆ ಮತ್ತು ಪೊಲೀಸ್ ತಂಡವು ನೈದ್ಘಾಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಕಿಶ್ತ್ವಾರ್ನಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಕೌಂಟರ್ನಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು – ಜೂನಿಯರ್ ಕಮಿಷನ್ಡ್ ಆಫೀಸರ್ ನೈಬ್ ಸುಬೇದಾರ್ ವಿಪನ್ ಕುಮಾರ್ ಮತ್ತು ಸಿಪಾಯಿ ಅರವಿಂದ್ ಸಿಂಗ್ ಎಂದು ಗುರುತಿಸಲಾಗಿದೆ.