ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ಡೆಂಗ್ಯೂ ಆತಂಕ ಶುರುವಾಗಿದ್ದು, ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.
27 ವರ್ಷದ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವುದಾಗಿ ಬಿಬಿಎಂಪಿ ಧೃಡಪಡಿಸಿದೆ. ಕಗ್ಗದಾಸಪುರದಲ್ಲಿ 27 ವರ್ಷದ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದು, ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ.
ಮಹಾಮಾರಿ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ತಮ್ಮ ಮನೆಯ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗದಂತೆ ನೋಡಿಕೊಳ್ಳಬೇಕು . ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಡೆಂಗಿ ಜ್ವರ ಹರಡಲಿದ್ದು, ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಅವು ಕಚ್ಚುತ್ತವೆ. ಜನ ಸಾಮಾನ್ಯರು 5-6 ದಿನಗಳಿಗೊಮ್ಮೆ ಶೇಖರಣೆ ಮಾಡಿಕೊಂಡ ನೀರಿನ ತೊಟ್ಟಿ, ಡ್ರಮ್, ಬ್ಯಾರೆಲ್ ಇತರೆ ನೀರಿನ ಸಂಗ್ರಹಾರಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.