alex Certify BIG NEWS : ಮಾಜಿ ಸಿಎಂ ‘S.M ಕೃಷ್ಣ’ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾಜಿ ಸಿಎಂ ‘S.M ಕೃಷ್ಣ’ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ಇಂದು (ಡಿ.11) ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪಕಟಿಸಿದೆ.

ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 2:11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...