alex Certify BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವನ ಬರ್ಬರ ಹತ್ಯೆ ಪ್ರಕರಣ : ತಮಿಳುನಾಡಲ್ಲಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವನ ಬರ್ಬರ ಹತ್ಯೆ ಪ್ರಕರಣ : ತಮಿಳುನಾಡಲ್ಲಿ ಇಬ್ಬರು ಅರೆಸ್ಟ್

ಚಾಮರಾಜನಗರ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಗನ್ ಎಂಬಾತ ಹಾಗೂ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಚಾಮರಾಜನಗರ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಪ್ರಕರಣದ ಮತಿಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದು, ಚಾಮರಾಜನಗರ ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

ಯಾರಿದು ಆರೋಪಿ..? ಯಾಕೆ ಈ ಕೃತ್ಯ

ಬಂಧಿತ ಮುರುಗನ್ ಎಂಬ ಆರೋಪಿ ಹಲವು ವರ್ಷಗಳಿಂದ ಮಹದೇವಪ್ಪ ಅವರ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದನು. ಮಹದೇವಯ್ಯ ಅವರ ಬಳಿ ಹಣ ಇರುವುದನ್ನು ಗಮನಿಸಿದ ಮುರುಗನ್ ಹತ್ಯೆ ಮಾಡಲು ಹೊಂಚು ಹಾಕಿದ್ದನು. ಹಣದ ಅವಶ್ಯಕತೆಯಿದ್ದ ಹಿನ್ನೆಲೆ ಮುರುಗನ್ ಮತ್ತಿತರರ ತಂಡ ಮಹದೇವಯ್ಯ ಅವರ ಮನೆಯಲ್ಲಿ ಹಣ, ಚಿನ್ನಾಭರಣ ದೋಚಿ ಈ ಕೃತ್ಯ ನಡೆಸಿದೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಮತ್ತಿಬ್ಬರಿಗಾಗಿ ಬಲೆ ಬೀಸಿದ್ದಾರೆ. ಹಣಕ್ಕಾಗಿಯೇ ಈ ಕೊಲೆ ನಡೆದಿರುವುದು ತಿಳಿದು ಬಂದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದರು. ಮಹದೇಶ್ವರ ಬೆಟ್ಟದಲ್ಲಿ ಟವರ್ ಲೊಕೇಶನ್ ಟ್ರೇಸ್ ಆದ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತೀವ್ರ ತಪಾಸಣೆ ನಡೆಸಿದ್ದರು. ನಂತರ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ದುಷ್ಕರ್ಮಿಗಳು ಹನೂರು ಬಳಿ ಮಹದೇವಯ್ಯ ಅವರನ್ನು ಕೊಲೆ ಮಾಡಿ ಶವವನ್ನು ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದರು .

ರಾಮಾಪುರದ ನಿರ್ಜನ ಪ್ರದೇಶದಲ್ಲಿ ಅವರ ಶವ ಪತ್ತೆಯಾಗಿದ್ದು, ಬೆಡ್ ಶೀಟ್ ಮುಚ್ಚಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...