ಮಂಗಳೂರು : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲು ಸೋಂಕಿನಿಂದ ಬಳಲುತ್ತಿರುವ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.