ನವದೆಹಲಿ : ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ (ಸಂಸದ) ಸಂಜಯ್ ಸಿಂಗ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹೌದು, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ಮುಖಂಡ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ.ವರಲೆ ಅವರ ನ್ಯಾಯಪೀಠವು ಆರು ತಿಂಗಳಿನಿಂದ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಈ ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಜಾಮೀನು ನೀಡಿದರೆ ಯಾವುದೇ ಆಕ್ಷೇಪವಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.