ನವದೆಹಲಿ : ದೆಹಲಿ ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ನ್ಯಾಯಾಲಯವು ಆಗಸ್ಟ್ ೬ ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು.
ದೆಹಲಿ ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26, 2023 ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ನಂತರ ಇಡಿ ಅವರನ್ನು ಬಂಧಿಸಿತ್ತು. ಸಿಸೋಡಿಯಾ ಅವರು ಫೆಬ್ರವರಿ 28, 2023 ರಂದು ದೆಹಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿದ ಪ್ರಕರಣಗಳಲ್ಲಿ ನ್ಯಾಯಾಲಯವು ಸಿಸೋಡಿಯಾಗೆ ಜಾಮೀನು ನೀಡಿತು. ಸಿಸೋಡಿಯಾ 17 ತಿಂಗಳ ನಂತರ ಜೈಲಿನಿಂದ ಹೊರಬರಲಿದ್ದಾರೆ.