ಬೆಳಗಾವಿ : MBBS ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿದ್ದುಪಡಿ ವಿಧೇಯಕ ಮಂಡಿಸಿದರು.
ಸರ್ಕಾರಿ ಆರೋಗ್ಯ ಸೇವೆಯಲ್ಲಿ ವೈದ್ಯರ ಕೊರತೆ ನೀಗಿಸಿಕೊಳ್ಳಲು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ವೈದ್ಯರ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯದಲ್ಲಿ ವೈದ್ಯ ಪದವಿ ಪೂರೈಸಿದ ವಿದ್ಯಾರ್ಥಿಗಳ ಕಡ್ಡಾಯ ಸೇವೆ ಬಳಸಿಕೊಳ್ಳುವ ಕಾಯ್ದೆಗೆ ಸರ್ಕಾರ ತಿದ್ದುಪಡಿ ತರುತ್ತಿದೆ.
ಈಗಾಗಲೇ ಎಂಬಿಬಿಎಸ್ ಮುಗಿಸಿದಂತ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ಗೌರವ ಧನ ಕೂಡ ನೀಡಲಾಗುತ್ತಿದೆ. ತಿದ್ದುಪಡಿ ಬಿಲ್ ಮಂಡನೆಯಿಂದ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ಸಿಗಲಿದೆ.