ಮೈಸೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿರುವುದು ನಿಜ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿರುವುದು ನಿಜ. ಸ್ಪೋಟದಲ್ಲಿ ಒಂಭತ್ತು ಮಂದಿ ಗಾಯಗೊಂಡಿದ್ದು, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆರೋಪಿ ಕಪ್ಪು ಬಣ್ಣದ ಮಾಸ್ಕ್ ಹಾಕಿಕೊಂಡು ಬಂದಿದ್ದಾನೆ. ಆರೋಪಿ ಟೋಪಿ ಹಾಕಿಕೊಂಡಿರುವ ಬಂದಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಆರೋಪಿ ಬಸ್ ನಿಂದ ಇಳಿದು ಹೋಗಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದರು.