ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಛಾಟನೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಂಸತ್ ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಪ್ರಶ್ನೆ ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನೈತಿಕ ಸಮಿತಿ ಲೋಕಸಭೆಗೆ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಛಾಟಿಸಲು ನಿರ್ಣಯ ಕೈಗೊಳ್ಳಲಾಯಿತು. ಟಿಎಂಸಿ ಸಂಸದೆ ಮಹುವಾ ಅವರನ್ನು ಉಚ್ಛಾಟಿಸುವ ನಿರ್ಣಯ ಕೈಗೊಳ್ಳುತ್ತಿದ್ದಂತೆ ವಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್(ಟಿಎಂಸಿ) ನಾಯಕಿ ಮತ್ತು ಮಾಜಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ಭಾರತೀಯ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯ ಪಟ್ಟಿದ್ದರು.
.