ಉಡುಪಿ : ರಾಜ್ಯದಲ್ಲಿ ದುಷ್ಕರ್ಮಿಗಳು ಎಟಿಎಂ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.
ಕಾಪುವಿನಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಗೆ ನುಗ್ಗಿದ ಮೂವರು ಮುಸುಕುದಾರಿ ದುಷ್ಕರ್ಮಿಗಳು ಎಟಿಎಂ ಒಡೆದು ಹಣ ದೋಚುವ ಯತ್ನ ನಡೆಸಿದ್ದಾರೆ. ಆಗ ಸೈರನ್ ಜೋರಾಗಿ ಕೂಗಿಕೊಂಡಿದ್ದು, ಖದೀಮರು ಭಯದಿಂದ ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬೆರಳಚ್ಚು ತಜ್ಞರು , ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಪು ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.