alex Certify BREAKING : ಖ್ಯಾತ ನಟ ‘ಅಜಿತ್ ಕುಮಾರ್’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಖ್ಯಾತ ನಟ ‘ಅಜಿತ್ ಕುಮಾರ್’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಖ್ಯಾತ ನಟ ಅಜಿತ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ನಟ ಅಜಿತ್ ಕುಮಾರ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶೂಟಿಂಗ್ ವೇಳೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೂಕ್ತ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಯಾವುದೇ ಭಯಪಡುವ ಅಗತ್ಯವಿಲ್ಲ, ಚಿಕ್ಕಪುಟ್ಟ ಆರೋಗ್ಯ ತೊಂದರೆ ಹಿನ್ನೆಲೆ ಅವರು ತಪಾಸಣೆಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಮಗಿಜ್ ತಿರುಮೇನಿ ನಿರ್ದೇಶನದ ಮತ್ತು ಲೈಕಾ ನಿರ್ಮಾಣದ ಚಿತ್ರದಲ್ಲಿ ಅಜಿತ್ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮಾರ್ಚ್ 2 ರಂದು ಅಜಿತ್ ಕುಮಾರ್ ತಮ್ಮ ಮಗನ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಫುಟ್ಬಾಲ್ ಕೇಕ್ ಕತ್ತರಿಸುವ ಮೂಲಕ ಆಚರಿಸಿ ಗಮನ ಸೆಳೆದಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...