alex Certify BREAKING : ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಸಹೋದರ ‘ಚೈತನ್ಯ’ ವಿಧಿವಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಸಹೋದರ ‘ಚೈತನ್ಯ’ ವಿಧಿವಶ.!

ಬೆಂಗಳೂರು : ಇತ್ತೀಚೆಗೆ ನಿಧನರಾದ ಖ್ಯಾತ ನಿರೂಪಕಿ ಅಪರ್ಣ ಅವರ ಸಹೋದರ ಚೈತನ್ಯ ಕೂಡ ಇಂದು ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಚಾರವನ್ನು ಫೇಸ್ ಬುಕ್ ನಲ್ಲಿ ಅಪರ್ಣಾ ಅವರ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ಹಂಚಿಕೊಂಡಿದ್ದಾರೆ.

‘’ ಅಪರ್ಣೆಯ ಅಣ್ಣ ಚೈತನ್ಯ ನಿನ್ನೆ ನಡುರಾತ್ರಿಯಲ್ಲಿ ಈ ಇಹತೊರೆದು ಸರಿದಿದ್ದಾರೆ. ತೀವ್ರತಮ ವಿಷಾದ.
ಕೆಲವು ಹೂವುಗಳು ಅರಳದೆ ಮೊಗ್ಗಾಗಿಯೇ ಉದುರಿಹೋಗುತ್ತವೆ. ಇನ್ನು ಕೆಲವು ಅರಳಿ ಹಣ್ಣಾಗದೆ ಕಮರುತ್ತವೆ. ಇನ್ನೂ ಕೆಲವನ್ನು ಒತ್ತಾಯದಿಂದ ಕೊಯ್ದು ಕತ್ತರಿಸಲಾಗುತ್ತದೆ. ಯಾರು ಯಾವುದೆಂದು ನಾನು ಈವರೆಗೂ ಅರಿತಿಲ್ಲ. ಅರಿಯುವ ಜಿಜ್ಞಾಸೆಯೂ ಈ ಹೊತ್ತಿನದಲ್ಲ. ದಿನದಿಂದ ದಿನಕ್ಕೂ ನಾನು ಹೆಚ್ಚು ಹೆಚ್ಚು ಒಬ್ಬನಾಗುತ್ತಿರುವುದು ಯಾವೊತ್ತಿನ ಸತ್ಯ. ಬಹುಶಃ ಎಲ್ಲರದೂನು’ನಮಸ್ಕಾರ…ಎಂದು ಅವರು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ತಮ್ಮ ಮದುವೆ ಸಂದರ್ಭದಲ್ಲಿ ಚೈತನ್ಯ ನಾರಾಯಣಸ್ವಾಮಿ ಇರುವ ಫೋಟೋವನ್ನು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

 

 

 

 

 

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...